ಶಿವಮೊಗ್ಗ: ಭಜರಂಗದಳ ಕಾರ್ಯಕರ್ತನ ಹತ್ಯೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಗಲಭೆ ಹೆಚ್ಚಾಗಿದೆ. ದುಷ್ಕರ್ಮಿಗಳು ಮನೆ ಎದುರು ನಿಲ್ಲಿಸಿದ ವಾಹನಗಳಿಗೆ ಬೆಂಕಿ ಇಡುತ್ತಿದ್ದಾರೆ.
ಸೀಗೆಹಟ್ಟಿ ಬಡಾವಣೆಯಲ್ಲಿ 3 ಬೈಕ್ ಹಾಗೂ 1 ಆಟೋಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸುಟ್ಟು ಕರಕಲಾಗಿವೆ.
ಅಗ್ನಿ ಶಾಮಕ ದಳದ ಸಿಬ್ಬಂದಿ ವಾಹನಗಳಿಗೆ ತಗುಲಿರುವ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ವಾಹನಗಳಿಗೆ ಬೆಂಕಿ ಇಡುವುದರ ಜೊತೆಗೆ ನಿರಂತರವಾಗಿ ಕಲ್ಲು ತೂರಾಟ ನಡೆಸಲಾಗುತ್ತಿದ್ದು, ಪರಿಸ್ಥಿತಿ ನಿಯಂತ್ರಿಸಲು ಲಾಠಿ ಚಾರ್ಜ್ ಮಾಡಲಾಗುತ್ತಿದೆ.
ಎಸ್ಪಿ ಲಕ್ಷ್ಮೀಪ್ರಸಾದ್ ಮನೆಯಿಂದ ಹೊರಬಂದರೆ ಲಾಠಿ ಚಾರ್ಜ್ ಮಾಡುವುದಾಗಿ ಮೈಕ್, ಪೊಲೀಸ್ ವಾಹನಗಳ ಮೂಲಕ ಜನರಿಗೆ ಎಚ್ಚರಿಕೆ ನೀಡುತ್ತಿದ್ದಾರೆ.