ಶಿವಮೊಗ್ಗ: ಜಾತಿ ಸರ್ಟಿಫಿಕೇಟ್ ಪಡೆಯಲು ಅರ್ಜಿ ಸಲ್ಲಿಸಿದ್ದ ವ್ಯಕ್ತಿಯೊಬ್ಬರಿಗೆ ನಕಲಿ ಜಾತಿ ಪ್ರಮಾಣ ಪತ್ರವನ್ನು ವಿತರಿಸಿದ ಶಿವಮೊಗ್ಗ ತಹಶೀಲ್ದಾರ್ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.
ಸುಳ್ಳು ಮಾಹಿತಿ ನೀಡಿ, ಶೇಷಪ್ಪ ಎಂಬುವರು ನಕಲಿ ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಂಡಿದ್ದರು.
ಅರ್ಜಿಯಲ್ಲಿ ಅವರು ನೀಡಿದ್ದ ಮಾಹಿತಿ ಪರಿಶೀಲಿಸದೇ ತಹಶೀಲ್ದಾರ್ ಜಾತಿ ಪ್ರಮಾಣ ಪತ್ರವನ್ನು ನೀಡಿದ್ದಾರೆ ಎಂಬುದಾಗಿ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ ದೂರು ನೀಡಿತ್ತು.
ಈ ದೂರಿನ ಹಿನ್ನಲೆಯಲ್ಲಿ ಜಯನಗರ ಪೊಲೀಸ್ ಠಾಣೆಯಲ್ಲಿ ಇದೀಗ ಶಿವಮೊಗ್ಗ ತಹಶೀಲ್ದಾರ್, ರೆವೆನ್ಯೂ ಇನ್ಸ್ ಪೆಕ್ಟರ್ ಹಾಗೂ ಗ್ರಾಮಲೆಕ್ಕಿಗರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.