ಚೆನ್ನೈ : ಡಿಎಂಕೆ ರಾಜ್ಯಸಭಾ ಸದಸ್ಯ ಎನ್ ಆರ್ ಇಳಂಗೋವನ್ ಪುತ್ರ 22 ವರ್ಷದ ರಾಕೇಶ ರಸ್ತೆ ಅಪಘಾತದ ಮೃತಪಟ್ಟಿದ್ದಾರೆ.
ರಾಕೇಶ್ ಇನ್ನೋರ್ವ ವ್ಯಕ್ತಿಯೊಂದಿಗೆ ಕಾರಿನಲ್ಲಿ ಪುದಿಚೆರಿಯಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದರು.
ಅವರು ಪ್ರಯಾಣಿಸುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದು, ರಾಕೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರೊಂದಿಗೆ ಪ್ರಯಾಣಿಸುತಿದ್ದವರಿಗೆ ಗಂಭೀರ ಗಾಯಗಳಾಗಿವೆ.
ಹಿರಿಯ ವಕೀಲರಾಗಿರುವ ಎನ್ ಆರ್ ಇಳಂಗೋವನ್ ಅವರು 2020 ರಲ್ಲಿ ತಮಿಳುನಾಡಿನಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.