ಬೆಂಗಳೂರು : ಹಿಜಾಬ್ ಧಾರ್ಮಿಕ ಅಚರಣೆ ಅಲ್ಲ ಎಂಬ ಹೈಕೋರ್ಟ್ ತೀರ್ಪಿನ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಮುಸ್ಲಿಂ ಸಂಘಟನೆ ಅಮಿರ್-ಇ-ಷರಿಯತ್ ಇಂದು ಕರ್ನಾಟಕ ಬಂದ್ ಗೆ ನೀಡಿದ ಕರೆಗೆ ಮುಸ್ಲಿಂ ಸಮುದಾಯದಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯದಾದಂತ್ಯ ಮುಸ್ಲಿಂ ಸಮುದಾಯದ ವ್ಯಾಪಾರ ವ್ಯವಹಾರ ಸಂಪೂರ್ಣ ಬಂದ್ ಆಗಿವೆ.
ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ.ಹಿಜಾಬ್ ಧರಿಸುವಂತಿಲ್ಲ ಎಂಬುದಾಗಿ ಹೈಕೋರ್ಟ್ ತೀರ್ಸದಸ್ಯ ಪೀಠವು ಮಹತ್ವದ ತೀರ್ಪು ನೀಡಿತ್ತು. ರಾಜ್ಯಾಧ್ಯಂತ ಹೈಕೋರ್ಟ್ ತೀರ್ಪಿನ ವಿರುದ್ಧ ವಿದ್ಯಾರ್ಥಿನಿಯರು ಸಿಡಿದೆದ್ದಿದ್ದಾರೆ. ಅಲ್ಲದೇ ತರಗತಿ, ಪರೀಕ್ಷೆಯನ್ನು ಬಹಿಷ್ಕರಿಸಿ ಮನೆಗೆ ನಡೆದಿದ್ದಾರೆ. ಇದೇ ಸಂದರ್ಭದಲ್ಲಿ ಹಿಜಾಬ್ ಧರಿಸೋದಕ್ಕೆ ಅನುಮತಿ ಕೋರಿ ಇಂದು ಕರ್ನಾಟಕ ಬಂದ್ ಗೆ ಮುಸ್ಲೀಂ ಮುಖಂಡರಿಂದ ಕರೆ ನೀಡಲಾಗಿದೆ.
ಈ ಬಗ್ಗೆ ಇಂದು ಮುಸ್ಲೀಂ ಧರ್ಮಗುರುಗಳ ಸಭೆ ನಡೆಸಲಾಗಿದ್ದು, ಈ ಸಭೆಯಲ್ಲಿ ಮುಖಂಡ ಸಗೀರ್ ಅಹ್ಮದ್ ಅವರು, ಗುರುವಾರ ಸ್ವಯಂ ಪ್ರೇರಿತವಾಗಿ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಇಡೀ ರಾಜ್ಯಾಧ್ಯಂತ ವ್ಯಾಪಾರ ವಹಿವಾಟು ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ವೈದ್ಯರು, ಕಾರ್ಮಿಕರು, ಸರ್ಕಾರಿ ಉದ್ಯೋಗಿಗಳು ಸೇರಿದಂತೆ ಸಮುದಾಯದ ಎಲ್ಲರೂ ಬಂದ್ ಪಾಲ್ಗೊಳ್ಳುವಂತೆ ಕೋರಿದೆ. ಸಮುದಾಯದ ಶಾಲಾ-ಕಾಲೇಜುಗಳನ್ನು ಬಂದ್ ಮಾಡುವಂತೆ ಮನವಿ ಮಾಡಿದೆ. ಆದರೆ ಇದು ಶಾಂತಿಯುತ ಪ್ರತಿಭಟನೆಯಾಗಿದ್ದು, ಬಲವಂತದ ಬಂದ್ ಮಾಡಬಾರದು ಎಂದು ಕೋರಿದೆ.