No menu items!
Thursday, December 26, 2024

ನವೀನ್ ಪಾರ್ಥಿರ್ವ ಶವ ಬೆಂಗಳೂರಿಗೆ ಆಗಮನ, ಆಂಬುಲೆನ್ಸ್ ನಲ್ಲಿ ಹಾವೇರಿಗೆ ರವಾನೆ

Must read

ಬೆಂಗಳೂರು :  ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧದ ಸಂದರ್ಭದಲ್ಲಿ ರಷ್ಯಾ ಸಿಡಿಸಿದ ಸೆಲ್ ದಾಳಿಯಲ್ಲಿ ಸಾವನ್ನಪ್ಪಿದ್ದ ಕನ್ನಡಿಗ ವೈದ್ಯಕೀಯ ವಿದ್ಯಾರ್ಥಿ ನವೀನ್ ಪಾರ್ಥಿವ ಶರೀರ 21 ದಿನಗಳ ನಂತರ ತಾಯ್ನಾಡಿಗೆ ತಲುಪಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಗೋ ವಿಭಾಗದಲ್ಲಿ ಪಾರ್ಥಿವ ಶರೀರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿದ್ಯಾರ್ಥಿಯ ಕುಟುಂಬಕ್ಕೆ ಹಸ್ತಾಂತರಿಸಿದರು.
ದುಬೈ ಮೂಲಕ ಸೋಮವಾರ ಮುಂಜಾನೆ 3 ಗಂಟೆ ವೇಳೆ ನವೀನ್ ಪಾರ್ಥಿವ ಶರೀರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಸಂಸದ ಶಿವಕುಮಾರ್ ಉದಾಸಿ, ಸಚಿವ ಡಾ.ಕೆ.ಸುಧಾಕರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಇತರರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಮೃತ ನವೀನ್ ಸಹೋದರ ಹರ್ಷ ಸೇರಿದಂತೆ ಗ್ರಾಮಸ್ಥರು ಪಾರ್ಥಿವ ಶರೀರವನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಪಡೆದುಕೊಂಡು ಆಂಬ್ಯುಲೆನ್ಸ್​ನಲ್ಲಿ ಹಾವೇರಿ ಜಿಲ್ಲೆಯ ಸ್ವಗ್ರಾಮಕ್ಕೆ ತೆರಳಿದರು.

ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನವೀನ್ ತಂದೆ, ತಾಯಿ ಆತ ಮೆಡಿಕಲ್ ಮುಗಿಸಿ ಬಂದ ನಂತರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಮ್ಮ ಮಗನನ್ನು ಸ್ವಾಗತಿಸಬೇಕಿತ್ತು. ಆದರೆ, ಇಂದು ಆತನ ಪಾರ್ಥಿವ ಶರೀರ ಬೆಂಗಳೂರಿಗೆ ಬಂದಿರುವುದು ಬಹಳ ನೋವಿನ ಸಂಗತಿ. ಯೋಚನೆ ಮಾಡುವುದಕ್ಕೂ ಕಷ್ಟವಾಗುತ್ತದೆ ಎಂದರು.

ಮಾಡುವುದಕ್ಕೂ ಕಷ್ಟವಾಗುತ್ತದೆ ಎಂದರು.
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವು ಇಡೀ ಪ್ರಪಂಚವನ್ನೇ ತಲ್ಲಣಗೊಳಿಸಿದೆ. ನಮ್ಮ ದೇಶದ ಹಲವಾರು ವಿದ್ಯಾರ್ಥಿಗಳು ಮೆಡಿಕಲ್ ಓದುತ್ತಿರುವುದು ಗೊತ್ತಿರುವ ವಿಷಯ. ಅನೇಕ ಮಂದಿ ಸುರಕ್ಷಿತವಾಗಿ ವಾಪಸ್ ಬಂದಿದ್ದಾರೆ. ದುರ್ದೈವವೆಂದರೆ ನವೀನ್​ ಮಿಸೈಲ್​​ ದಾಳಿಯಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಾದ ಕ್ಷಣದಿಂದ ನವೀನ್ ಕುಟುಂಬದೊಂದಿಗೆ ನಾನು ನಿರಂತರ ಸಂಪರ್ಕದಲ್ಲಿದ್ದೇನೆ. ಅಂದೇ ನಮ್ಮ ಪ್ರಧಾನಿಯವರು ಕುಟುಂಬದವರನ್ನು ಸಂಪರ್ಕಿಸಿ ಸಾಂತ್ವನ ಹೇಳಿದ್ದರು ಎಂದು ತಿಳಿಸಿದರು.
ತಾಯ್ನಾಡು ತಲುಪಿದ ನವೀನ್ ಪಾರ್ಥಿವ ಶರೀರಕ್ಕೆ ನಮನ

ನವೀನ್ ಮೃತದೇಹವಿದ್ದ ಪಶ್ಚಿಮ ಭಾಗದಲ್ಲಿ ಯುದ್ಧ ನಡೆಯುತ್ತಿದ್ದು, ಮೃತದೇಹವನ್ನು ಪ್ಯಾಕ ಮಾಡಿ ಪೋಲೆಂಡ್​ನ ವಾರ್ಸಾವಕ್ಕೆ ತಂದಿದ್ದು, ಅಲ್ಲಿಂದ ದುಬೈಗೆ ಮೂಲಕ ಇಂದು ಮುಂಜಾನೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದೆ.

ಕರ್ನಾಟಕ ಸರ್ಕಾರ ಪಾರ್ಥಿವ ಶರೀರವನ್ನು ಅವರ ಸ್ವಗ್ರಾಮಕ್ಕೆ ತಲುಪಿಸುವ ಜವಾಬ್ದಾರಿ ವಹಿಸಿಕೊಂಡು ತಲುಪಿಸುತ್ತದೆ. ಮೃತರ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡುವುದು ದೊಡ್ಡದಲ್ಲ, ಅವರ ಅಣ್ಣನಿಗೆ ಸರ್ಕಾರದಿಂದ ಆರ್ಥಿಕ ನೆರವು ನೀಡಲಾಗುವುದು.

ಇದೇ ವೇಳೆ,ಮಗನ ಪಾರ್ಥಿವ ಶರೀರ ತರಿಸಿದ್ದಕ್ಕೆ ನವೀನ್​ ಕುಟುಂಬ ಸಿಎಂಗೆ ಧನ್ಯವಾದ ತಿಳಿಸಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article

error: Content is protected !!