ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಲಂಚ ಮತ್ತು ಪ್ರಭಾವ ಬೀರಿ ಸರ್ಕಾರಿ ಕೆಲಸಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದ ಆರೋಪದ ಮೇಲೆ ಒಂಬತ್ತು ಮಂದಿ ಖಾಸಗಿ ಮಧ್ಯವರ್ತಿಗಳ ಮೇಲೆ ಮಂಗಳವಾರ ಬೆಳಿಗ್ಗೆ ದಾಳಿ ಮಾಡಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶೋಧ ನಡೆಸುತ್ತಿದೆ.
ಮೋಹನ್ ಕುಮಾರ್ ವಿರುದ್ಧ ಭ್ರಷ್ಟಾಚಾರ, ಅವ್ಯವಹಾರದ ಆರೋಪದ ಹಿನ್ನೆಲೆಯಲ್ಲಿ ಆರ್.ಟಿ.ನಗರದ ಮನೋರಾಯನಪಾಳ್ಯದಲ್ಲಿರುವ ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿ ವೇಳೆ ಮಧ್ಯವರ್ತಿ ಮೋಹನಕುಮಾರ್ ಮನೆ ದಾಳಿವೇಳೆ 4.5 ಕೆಜಿ ಚಿನ್ನ ಪತ್ತೆಯಾಗಿದೆ ಎಂದು ವರದಿಗಳು ತಿಳಿಸಿವೆ.
ಐಷಾರಾಮಿ ಮನೆಯಲ್ಲಿ ಎರಡೂವರೆ ಕೋಟಿ ಮೌಲ್ಯದ ಚಿನ್ನ, ಕಂತೆ ಕಂತೆ ನೋಟುಗಳು ಸಹ ಪತ್ತೆಯಾಗಿದೆ. ಅಪಾರ ಪ್ರಮಾಣದ ಬೆಳ್ಳಿ ತಟ್ಟೆ, ಲೋಟ, ಬಟ್ಟಲು, ದೀಪ, ಚಿನ್ನದ ಸರ, ಚಿನ್ನದ ಓಲೆ, ಚಿನ್ನಡ ಡಾಬು ಸಿಕ್ಕಿದೆ ಎಂದು ಹೇಳಲಾಗಿದೆ.
9 ಎಸಿಬಿ ಅಧಿಕಾರಿಗಳ ತಂಡದಿಂದ ಶೋಧಕಾರ್ಯ ಮುಂದುವರಿದಿದೆ. ಎಸಿಬಿ ಡಿವೈಎಸ್ಪಿ ಪ್ರಕಾಶ್ ರೆಡ್ಡಿ, ಇನ್ಸ್‌ಪೆಕ್ಟರ್ ಮಂಜುನಾಥ್ ಸೇರಿದಂತೆ 9 ಅಧಿಕಾರಿಗಳ ತಂಡದಿಂದ ಶೋಧಕಾರ್ಯ ನಡೆಯುತ್ತಿದೆ.