No menu items!
Thursday, November 21, 2024

ಪುಣೆಯಲ್ಲಿ ನಿರ್ಮಾಣ ಹಂತದ ಕಟ್ಟಡದ ಸ್ಲಾಬ್ ಕುಸಿದು ಐವರು ಕಾರ್ಮಿಕರ ಸಾವು

Must read

ಪುಣೆ : ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಐವರು ಕಟ್ಟಡ ಕಾರ್ಮಿಕರು ಮೃತಪಟ್ಟು, ಏಳು ಜನ ಗಾಯಗೊಂಡ ಘಟನೆ ಪುಣೆಯ ಯರವಾಡ ಪ್ರದೇಶದ ಶಾಸ್ತ್ರಿನಗರ ಪ್ರದೇಶದಲ್ಲಿ ನಡೆದಿದೆ.

ಅಪಘಾತಕ್ಕೆ ಕಾರಣವೆಂದು ಗುತ್ತಿಗೆದಾರನ ವಿರುದ್ಧ ಎಫ್‌ಐಆರ್ ದಾಖಲಿಸಿ, ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪುಣೆ ಪೊಲೀಸ್ ಕಮಿಷನರ್ ಅಮಿತಾಬ್ ಗುಪ್ತಾ ತಿಳಿಸಿದ್ದಾರೆ.

ಘಟನೆಯ ತನಿಖೆಗೆ ಹಿರಿಯ ಅಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲು ಆದೇಶ ಹೊರಡಿಸಲಾಗಿದೆ. ಮೇಲ್ನೋಟಕ್ಕೆ, ರಚನೆಯ ಅಡಿಪಾಯದ ವೈಫಲ್ಯವೇ ಕಾರಣ ಎಂದು ತೋರುತ್ತದೆ. ತಾಂತ್ರಿಕ ತಜ್ಞರ ಸಹಾಯವನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಪುಣೆ ಮುನ್ಸಿಪಲ್ ಕಮಿಷನರ್ ಮಾಹಿತಿ ನೀಡಿದ್ದಾರೆ.

ಈ ದುರ್ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದು, ನೊಂದ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.

ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಕಟ್ಟಡದ ನೆಲಮಾಳಿಗೆಯ ಸ್ಲ್ಯಾಬ್ ನಿರ್ಮಿಸಲು ಉದ್ದೇಶಿಸಿರುವ ಸ್ಟೀಲ್ ಬಾರ್‌ಗಳ ರಚನೆ ಗುರುವಾರ ತಡರಾತ್ರಿ ಕುಸಿದಿದೆ.

ಗಾಯಾಳುಗಳನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆ ದಾಖಲಾಗಿಸಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article

error: Content is protected !!