ಪುಣೆ: ಕೈಗಾರಿಕೋದ್ಯಮಿ ಮತ್ತು ಬಜಾಜ್ ಗ್ರೂಪ್‌ನ ಮಾಜಿ ಅಧ್ಯಕ್ಷ ರಾಹುಲ್ ಬಜಾಜ್ ಫೆಬ್ರವರಿ 12 ರಂದು ಶನಿವಾರ ನಿಧನರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು.
“ದಿವಂಗತ ರೂಪಾ ಬಜಾಜ್ ಅವರ ಪತಿ ರಾಹುಲ್ – , ರಾಜೀವ್, ದೀಪಾ, ಸಂಜೀವ್, ಶೆಫಾಲಿ, ಸುನೈನಾ ಮತ್ತು ಮನೀಶ್ ಅವರ ತಂದೆ ಶ್ರೀ ರಾಹುಲ್ ಬಜಾಜ್ ಅವರ ನಿಧನದ ಬಗ್ಗೆ ನಾನು ನಿಮಗೆ ತೀವ್ರ ದುಃಖದಿಂದ ತಿಳಿಸುತ್ತೇವೆ. ಅವರು ಅವರ ಹತ್ತಿರದ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಫೆಬ್ರವರಿ 12 ರ ಮಧ್ಯಾಹ್ನ ನಿಧನರಾದರು,” ಎಂದು ಬಜಾಜ್ ಗ್ರೂಪ್‌ನ ಪ್ರಕಟಣೆ ತಿಳಿಸಿದೆ.
ರಾಹುಲ್ ಬಜಾಜ್ ಅವರಿಗೆ ನ್ಯುಮೋನಿಯಾ ಮತ್ತು ಹೃದಯ ಸಮಸ್ಯೆಯೂ ಇತ್ತು. ಕಳೆದ ಒಂದು ತಿಂಗಳಿನಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು – ರೂಬಿ ಹಾಲ್ ಕ್ಲಿನಿಕ್- ನ ಮ್ಯಾನೇಜಿಂಗ್ ಟ್ರಸ್ಟಿ ಡಾ.ಪುರವೇಜ್ ಗ್ರಾಂಟ್ ಹೇಳಿದ್ದಾರೆ.
ಇಂದು ಮಧ್ಯಾಹ್ನ 2.30ಕ್ಕೆ ರಾಹುಲ್ ಬಜಾಜ್ ಕೊನೆಯುಸಿರೆಳೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಜೂನ್ 10, 1938 ರಂದು ಜನಿಸಿದ ರಾಹುಲ್ ಬಜಾಜ್ ಅವರು 40 ವರ್ಷಗಳ ಕಾಲ ಬಜಾಜ್ ಗ್ರೂಪ್‌ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದರು. ರಾಹುಲ್ ಬಜಾಜ್ ಕಳೆದ ವರ್ಷ ಏಪ್ರಿಲ್‌ನಲ್ಲಿ ಬಜಾಜ್ ಆಟೋ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಮತ್ತು ಪ್ರಸ್ತುತ ಸಂಸ್ಥೆಯ ಎಮೆರಿಟಸ್ ಅಧ್ಯಕ್ಷರಾಗಿದ್ದರು.