ಕಲಬುರಗಿ: ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ಭಾವನೆಯನ್ನು ಬಿಂಬಿಸುವ ವಸ್ತ್ರಗಳನ್ನು ಧರಿಸುವಂತಿಲ್ಲ, ಗುರುತುಗಳನ್ನು ದೇಹದ ಮೇಲೆ ಚಿತ್ರೀಸಿಕೊಳ್ಳುವಂತಿಸಿಲ್ಲ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದರೂ, ಇಂದು ಸೋಮವಾರ ಕಲಬುರಗಿ ನಗರದ ಉರ್ದು ಶಾಲೆಯ ವಿದ್ಯಾರ್ಥಿನಿಯರು ಶಾಲೆಗೆ ಹಿಜಬ್ ಧರಿಸಿ ಆಗಮಿಸಿದರು.
ಇಂದಿನಿಂದ ಪ್ರೌಢ ಶಾಲೆಯ ಪ್ರಾರಂಭದ ಹಿನ್ನಲೆ ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರುವ ಉರ್ದು ಪ್ರೌಢ ಶಾಲೆಯ 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರು, ಹಿಜಬ್ ಧರಿಸಿ ಶಾಲಾ ಕೊಠಡಿಯಲ್ಲಿ ಕುಳಿತಿದ್ದರು.
ಮಾಧ್ಯಮದವರು ಆಗಮಿಸುತ್ತಿದ್ದಂತೆ ಶಿಕ್ಷಕರು, ಕ್ಲಾಸ್ ರೂಮ್ಗೆ ತೆರಳಿ ಹಿಜಾಬ್ ತೆಗೆಯುವಂತೆ ಸೂಚನೆ ನೀಡಿದ್ದಾರೆ. ಶಿಕ್ಷಕರ ಸೂಚನೆ ಮೇರೆಗೆ ಹಿಜಾಬ್ ತೆಗೆದು ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದಾರೆ.
ವಿದ್ಯಾರ್ಥಿನಿಯರು ಹಳ್ಳಿಗಳಿಂದ ಬಂದಿದ್ದು, ಅವರಿಗೆ ಹೈಕೋರ್ಟ್ ಆದೇಶದ ಮಾಹಿತಿ ಇಲ್ಲದ ಕಾರಣ ಕ್ಲಾಸ್ ರೂಮ್ಲ್ಲಿ ಹಿಜಾಬ್ ಧರಿಸಿಯೇ ಕುಳಿತಿದ್ದರು. ಈ ವಿಷಯ ಶಿಕ್ಷಕರ ಗಮನಕ್ಕೆ ಬರುತ್ತಿದಂತೆ ಹಿಜಾಬ್ ತೆಗೆಸಲಾಗಿದೆ. ಹೈಕೋರ್ಟ್ ಆದೇಶ ಉಲ್ಲಂಘನೆ ಆಗಿಲ್ಲ ಎಂದು ಶಾಲೆಯ ಶಿಕ್ಷಕರು ತಿಳಿಸಿದ್ದಾರೆ.