ಕುಶಿನಗರ (ಉತ್ತರ ಪ್ರದೇಶ) : ವಿವಾಹ ಮಹೋತ್ಸವದ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮಹಿಳೆಯರು ಮತ್ತು ಮಕ್ಕಳನ್ನೊಳಗೊಂಡ 13 ಮಂದಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕುಶಿನಗರದಲ್ಲಿ ನಡೆದಿದೆ.
ಮದುವೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಹಳೆಯ ಬಾವಿಯನ್ನು ಮುಚ್ಚಿದ ಚಪ್ಪಡಿ ಮೇಲೆ ಕುಳಿತಿದ್ದರು. ಅತೀಯಾದ ಭಾರದ ರಭಸಕ್ಕೆ ಸ್ಲ್ಯಾಬ್ ಕುಸಿದು ಅದರ ಮೇಲೆ ಕುಳಿತಿದ್ದವರು ಬಾವಿಗೆ ಬಿದ್ದಿದ್ದಾರೆ. ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ 13 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 20 ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಸಂಭವಿಸಿದ್ದು ಜಿಲ್ಲೆಯ ನೌರಂಗಿಯಾ ಗ್ರಾಮದ ಮನೆಯೊಂದರಲ್ಲಿ ನಡೆದ ಮದುವೆ ಸಮಾರಂಭ ನಡೆದಿತ್ತು. ಬಾಲಕಿಯರು ಮತ್ತು ಮಹಿಳೆಯರ ಒಟ್ಟು 13 ಮೃತದೇಹಗಳನ್ನು ಬಾವಿಯಿಂದ ಹೊರ ತೆಗೆಯಲಾಗಿದೆ. ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ನೌರಂಗಿಯ ಗ್ರಾಮದ ಶಾಲೆಯ ಪಕ್ಕದಲ್ಲಿರುವ ಬಾವಿಗೆ ಪೂಜೆ ಸಲ್ಲಿಸಲು ಮದುವೆಗೆಂದು ಬಂದು ಬಂದಿದ್ದ ಮಹಿಳೆಯರು ಸೇರಿದ್ದರು ಎಂದು ಕುಶಿನಗರ ಪೊಲೀಸರು ತಿಳಿಸಿದ್ದಾರೆ.
ಬಾವಿ ಮುಚ್ಚಿದ್ದ ಕಲ್ಲಿನ ಮೇಲೆ ಪೂಜೆ ಮಾಡಲಾಗುತ್ತಿತ್ತು. ಈ ವೇಳೆ ಭಾರ ಹೆಚ್ಚಾದ ಕಾರಣ ಕಲ್ಲು ಕುಸಿದು ಬಾಲಕಿಯರು, ಮಹಿಳೆಯರು ಬಾವಿಗೆ ಬಿದ್ದಿದ್ದಾರೆ. ಬಾವಿಯಲ್ಲಿ ನೀರು ತುಂಬಿದ್ದರಿಂದ ಮಹಿಳೆಯರು ಬಾವಿಯಲ್ಲಿ ಮುಳುಗಿದ್ದಾರೆ.
ಅಪಘಾತದ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು, ಗ್ರಾಮದ ಜನರ ನೆರವಿನಿಂದ ಮೃತದೇಹಗಳನ್ನು ಬಾವಿಯಿಂದ ಹೊರತೆಗೆದಿದ್ದಾರೆ. ಜಿಲ್ಲೆಯ ಅಧಿಕಾರಿಗಳು 13 ಸಾವುಗಳನ್ನು ಖಚಿತಪಡಿಸಿದ್ದಾರೆ. ಇದೇ ವೇಳೆ 18ರಿಂದ 20 ಮಹಿಳೆಯರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಘಟನೆಗೆ ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿ, ಮೃತ ವ್ಯಕ್ತಿಯ ಹತ್ತಿರದ ಸಂಬಂಧಿಕರಿಗೆ ಎರಡು ಲಕ್ಷ ರೂಪಾಯಿ ಹಾಗೂ ಉತ್ತರ ಪ್ರದೇಶ ಸರಕಾರ ನಾಲ್ಕು ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.