No menu items!
Friday, November 22, 2024

ಶುಕ್ರವಾರ, ರಂಜಾನ್ ತಿಂಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಕೋರಿ ಕೋರ್ಟ್ ಗೆ ಅರ್ಜಿ

Must read

ಬೆಂಗಳೂರು : ವಿದ್ಯಾರ್ಥಿಗಳು ತರಗತಿಗಳಿಗೆ ಹಿಜಾಬ್ ಧರಿಸಿ ಬರದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ, ಈ ನಡುವೆ ಶುಕ್ರವಾರ ಮತ್ತು ಪವಿತ್ರ ರಂಜಾನ್ ತಿಂಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಕರ್ನಾಟಕ ಹೈಕೋರ್ಟ್ ನಲ್ಲಿ ಹೊಸ ಅರ್ಜಿ ಸಲ್ಲಿಸಲಾಗಿದೆ.

ಅರ್ಜಿದಾರ ಡಾ. ವಿನೋದ್ ಕುಲಕರ್ಣಿ, ಮಧ್ಯಂತರ ಆದೇಶದ ಭಾಗವಾಗಿ ಮುಸ್ಲಿಂ ಹುಡುಗಿಯರು ಕನಿಷ್ಠ ಶುಕ್ರವಾರ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಶುಕ್ರವಾರ ಮುಸ್ಲಿಮರಿಗೆ ಅತ್ಯಂತ ಮಂಗಳಕರ ದಿನವಾದ ಸಮಯದಲ್ಲಿ ಹಾಗೂ ರಂಜಾನ್ ತಿಂಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ ಮಾಡಿ ಆದೇಶ ಹೊರಡಿಸಬೇಕು ಎಂದು ಮನವಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಹೈಕೋರ್ಟ್ ಅಂತಿಮವಾಗಿ ತೀರ್ಪು ನೀಡುವವರೆಗೂ ಈ ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ಅಥವಾ ಕೇಸರಿ ಶಾಲುಗಳನ್ನು ಧರಿಸುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ತೀರ್ಪಿನಲ್ಲಿ ಹೇಳಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article

error: Content is protected !!