ಬೆಂಗಳೂರು : ರಾಜ್ಯದ ಇತಿಹಾಸದಲ್ಲೇ ಅತಿಹೆಚ್ಚು ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇದೀಗ ಐದನೇ ಸಲ ‘ಮುಖ್ಯಮಂತ್ರಿ’ ಯಾಗಿದ್ದಾರೆ. ಅದು “ತನುಜಾ” ಎಂಬ ಕನ್ನಡ ಚಲನಚಿತ್ರದಲ್ಲಿ ಅವರು ನಟಿಸುತ್ತಿದ್ದು ಮುಖ್ಯಮಂತ್ರಿಯ ಪಾತ್ರ ಮಾಡುತ್ತಿದ್ದಾರೆ. ಚಿತ್ರೀಕರಣ ಇಂದು ಭಾನುವಾರದಿಂದ ಪ್ರಾರಂಭವಾಗಿದೆ.
ತನುಜಾ ಎಂಬ ಹುಡುಗಿ ಕೋವಿಡ್ ಕಾರಣದಿಂದ ನೀಟ್ ಪರೀಕ್ಷೆ ಬರೆಯಲಾಗದೆ ತಮ್ಮ ಅಸಹಾಯಕತೆ ತೋಡಿಕೊಂಡಿದ್ದರು. ಇದಕ್ಕೆ ಸ್ಪಂದಿಸಿದ್ದ ಪತ್ರಕರ್ತ ವಿಶ್ವೇಶ್ವರ ಭಟ್ ಹಾಗೂ ಪ್ರದೀಪ ಈಶ್ವರ ಅವರ ಸಹಕಾರದಿಂದ ಪರೀಕ್ಷೆ ಬರೆದು ನೀಟ್ ಪರೀಕ್ಷೆ ಬರೆದು ಪಾಸಾಗಿದರು.
ಪರೀಕ್ಷೆ ಬರೆಯಲು ಸುಮಾರು 350ಕಿಮೀ ದೂರ ಪ್ರಯಾಣ ಮಾಡಿ ಬಂದು ಪರೀಕ್ಷೆ ಬರೆದಿದ್ದರು. ಇದನ್ನೇ ಕತೆಯಾಗಿಸಿಕೊಂಡು ಹರೀಶ್ ಎಂ.ಡಿ ಹಳ್ಳಿಯವರು ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಇದರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಪಾತ್ರವನ್ನೇ ನಿರ್ವಹಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಚಿತ್ರ ತಂಡ ದೃಢಪಡಿಸಿಲ್ಲ. ಶನಿವಾರ ಮೊದಲ ದಿನ ಅವರ ಭಾಗದ ಚಿತ್ರೀಕರಣ ನಡೆದಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.
ರಾಜಕೀಯ ನಾಯಕನಾಗಿ ಯಡಿಯೂರಪ್ಪ ಅವರನ್ನು ನೋಡಿರುವ ರಾಜ್ಯದ ಜನತೆಗೆ ಅವರು ಚಲನಚಿತ್ರದಲ್ಲಿ ಹೇಗೆ ಕಾಣಿಸುತ್ತಾರೋ ಎಂಬ ಕುತೂಹಲ ಇದ್ದೇ ಇರುತ್ತದೆ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದಲ್ಲಿ ಅಭಿನಯಿಸಿದ್ದ ಸಪ್ತ ಪಾವೂರು ಈ ಚಿತ್ರದ ಮುಖ್ಯಪಾತ್ರದಲ್ಲಿ ಅಭಿನಯಿಸುತ್ತಿದ್ದು ಪತ್ರಕರ್ತ ವಿಶ್ವೇಶ್ವರ ಭಟ್ ಸಹ ಅಭಿನಯಸುತ್ತಿದ್ದಾರೆ ಎಂದು ಹೇಳಲಾಗಿದೆ.