ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲುವಿಕೆಯಿಂದ ನೊಂದಿದ್ದ ಅಶ್ವಿನಿ ಅವರಿಗೆ ಈಗ ಮತ್ತೊಂದು ಆಘಾತ ಉಂಟಾಗಿದ್ದು ಅವರು ತಮ್ಮ ತಂದೆ ಭಾಗಮನೆ ರೇವನಾಥ್ ಅವರನೂ ಕಳೆದುಕೊಂಡಿದ್ದಾರೆ. ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನ ಹೊಂದಿದ್ದಾರೆ. ಅವರಿಗೆ 78 ವರುಷ ವಯಸ್ಸಯಾಗಿತ್ತು.
ಪುನೀತ್ ರಾಜ್ಕುಮಾರ್ ಅವರ ಮಾವ ಭಾಗಮನೆ ರೇವನಾಥ್ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅಶ್ವಿನಿ ಪುನೀತ್ ರಾಜ್ಕುಮಾರ್ ತಂದೆ ಭಾಗಮನೆ ರೇವನಾಥ್ ಅವರಿಗೆ 20 ವರ್ಷಗಳ ಹಿಂದೆ ಅವರಿಗೆ ಆ್ಯಂಜಿಯೋಪ್ಲಾಸ್ಟಿ ಮಾಡಲಾಗಿತ್ತು. ಪುನೀತ್ ರಾಜ್ಕುಮಾರ್ ನಿಧನದ ನಂತರ ಅವರು ತೀವ್ರ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ.
ಕಳೆದ ಅಕ್ಟೋಬರ್ ತಿಂಗಳಲ್ಲಿ ಪುನೀತ್ ರಾಜ್ಕುಮಾರ್ ಅವರು ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದು ಅಶ್ವಿನಿ ಅವರಿಗೆ ತೀವ್ರ ಆಘಾತ ಉಂಟು ಮಾಡಿತ್ತು. ಆ ನೋವು ಇನ್ನೂ ಹಸಿಯಾಗಿ ಇರುವಾಗಲೇ ಮತ್ತೊಂದು ಶಾಕ್ ಎದುರಾಗಿದೆ.
ಹೆಚ್ಎಐ ಮುಖ್ಯ ಇಂಜಿನಿಯರ್ ಆಗಿ ಕೆಲಸ ಮಾಡಿದ್ದ ಬಿ.ರೇವನಾಥ್ ಅವರು ಚಿಕ್ಕಮಗಳೂರು ತಾಲೂಕಿನ ಬಾಗೇಮನೆಯವರಾಗಿದ್ದರು. ಕಳೆದ 40 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು.