No menu items!
Tuesday, December 3, 2024

ಶಿವಮೊಗ್ಗ ಉಧ್ವಿಗ್ನ, ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

Must read

ಶಿವಮೊಗ್ಗ: ಭಜರಂಗದಳ ಕಾರ್ಯಕರ್ತನ ಹತ್ಯೆ ಹಿನ್ನೆಲೆಯಲ್ಲಿ ಶಿವಮೊಗ್ಗ ‌ನಗರದಲ್ಲಿ ಗಲಭೆ ಹೆಚ್ಚಾಗಿದೆ. ದುಷ್ಕರ್ಮಿಗಳು ಮನೆ ಎದುರು ನಿಲ್ಲಿಸಿದ ವಾಹನಗಳಿಗೆ ಬೆಂಕಿ ಇಡುತ್ತಿದ್ದಾರೆ.

ಸೀಗೆಹಟ್ಟಿ ಬಡಾವಣೆಯಲ್ಲಿ 3 ಬೈಕ್ ಹಾಗೂ 1 ಆಟೋಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸುಟ್ಟು ಕರಕಲಾಗಿವೆ.

ಅಗ್ನಿ ಶಾಮಕ ದಳದ ಸಿಬ್ಬಂದಿ ವಾಹನಗಳಿಗೆ ತಗುಲಿರುವ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ವಾಹನಗಳಿಗೆ ಬೆಂಕಿ ಇಡುವುದರ ಜೊತೆಗೆ ನಿರಂತರವಾಗಿ‌ ಕಲ್ಲು ತೂರಾಟ ನಡೆಸಲಾಗುತ್ತಿದ್ದು, ಪರಿಸ್ಥಿತಿ‌ ನಿಯಂತ್ರಿಸಲು ಲಾಠಿ ಚಾರ್ಜ್ ಮಾಡಲಾಗುತ್ತಿದೆ.

ಎಸ್​ಪಿ ಲಕ್ಷ್ಮೀಪ್ರಸಾದ್ ಮನೆಯಿಂದ ಹೊರಬಂದರೆ ಲಾಠಿ ಚಾರ್ಜ್ ಮಾಡುವುದಾಗಿ ಮೈಕ್, ಪೊಲೀಸ್ ವಾಹನಗಳ ಮೂಲಕ ಜನರಿಗೆ ಎಚ್ಚರಿಕೆ ನೀಡುತ್ತಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article

error: Content is protected !!