ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ವರುಷದ ಪ್ರಾಯೋಗಿಕ ಪರೀಕ್ಷೆಗೆ ವೇಳಾಪಟ್ಟಿ ನೀಡಿದೆ. ಪ್ರಾಯೋಗಿಕ ಪರೀಕ್ಷೆ 30 ಅಂಕ, ಥಿಯರಿ 70 ಸೇರಿ ಒಟ್ಟು 100 ಅಂಕಕ್ಕೆ ಪರೀಕ್ಷೆ ನಡೆಯಲಿದೆ. ಮಾರ್ಚ್ 25 ಪ್ರಾಯೋಗಿಕ ಪರೀಕ್ಷೆಗೆ ಡೆಡ್ ಲೈನ್ ಇದೆ.
ಮುಖ್ಯ ಪರೀಕ್ಷೆ ಏಪ್ರಿಲ್ 16ರಿಂದ ಮೇ 6ರವರೆಗೆ ನಡೆಯಲಿದೆ. Physics, chemistry, biology, psychology, computer science, electronics ವಿಷಯಗಳಿಗೆ ಪ್ರಯೋಗಿಕ ಪರೀಕ್ಷೆ ಇರಲಿದೆ. ಭಾಷಾ ವಿಷಯಗಳಿಗೆ ಪ್ರಾಯೋಗಿಕ ಪರೀಕ್ಷೆ ಇರಲ್ಲ.
ಪರೀಕ್ಷೆ ಪಿಯು ಬೋಡ್೯ ಮಾರ್ಗಸೂಚಿಯಂತೆ ಪರೀಕ್ಷೆ ನಡೆಯಲಿದೆ. ಡಿಡಿಪಿಯುಗಳ ನೇತೃತ್ವದಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಯ ಜಿಲ್ಲಾ ಉಸ್ತುವಾರಿ ಸಮಿತಿ ಮುಖ್ಯಸ್ಥರು, ಜಿಲ್ಲಾ ಪ್ರಚಾರಕರು, ವಿಜ್ಞಾನ ವಿಭಾಗದ ಉಪನ್ಯಾಸಕರು ಆಗಿರಬೇಕು.
ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ನಡೆಯು ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಿಬೇಕು. ಪ್ರಾಯೋಗಿಕ ಪರೀಕ್ಷೆ ಮುಗಿದ ತಕ್ಷಣವೇ ಪಿಯು ಬೋರ್ಡ್ಗೆ ಪರೀಕ್ಷೆ ಅಂಕಗಳು ಅಪ್ಲೋಡ್ ಮಾಡಬೇಕು.
ಗಮನಿಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ: ಎಪ್ರಿಲ್/ಮೇ ತಿಂಗಳಿನಲ್ಲಿ ನಡೆಯುವ ದ್ವಿತೀಯ ಪಿಯುಸಿ (2nd PUC) ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ (Karnataka PU Board) ಪರಿಷ್ಕರಣೆ ಮಾಡಿ ಶನಿವಾರ ಆದೇಶ ಹೊರಡಿಸಿದೆ. ಪರೀಕ್ಷೆ ಎಂದಿನಂತೆ ಏ.16ರಿಂದ ಮೇ.6ರವರೆಗೆ ನಡೆಯಲಿದೆ. ಏ.21ರಂದು ನಡೆಯಬೇಕಿದ್ದ ಭಾಷಾ ವಿಷಯಗಳಲ್ಲಿ ಉರ್ದು ಮತ್ತು ಅರೇಬಿಕ್ ವಿಷಯಗಳನ್ನು ಪ್ರತ್ಯೇಕಿಸಿ ಪರೀಕ್ಷೆ ನಡೆಸಲಾಗುತ್ತಿದೆ.
ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ವೇಳಾಪಟ್ಟಿಯನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ https://pue.kar.nic.in/ ನಲ್ಲಿ ಚೆಕ್ ಮಾಡಬಹುದು. ಇದರ ಪ್ರಕಾರವಾಗಿ ಏ.21ರಂದು ಉರ್ದು ಪರೀಕ್ಷೆ ಎಂದಿಂತೆ ನಡೆಯಲಿದ್ದು, ಈ ಮೊದಲು ರಜೆ ಅವಧಿಯಾಗಿದ್ದ ಏ.29ಕ್ಕೆ ಅರೆಬಿಕ್ ಪರೀಕ್ಷೆ ನಡೆಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.