ಬೆಂಗಳೂರು : ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ. ಮುಂಜಾಗ್ರತ ಕ್ರಮವಾಗಿ ಶಿವಮೊಗ್ಗ ನಗರದ ಶಾಲೆ, ಕಾಲೇಜುಗಳಿಗೆ ಇಂದು ಮಂಗಳವಾರ ರಜೆ ನೀಡಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ 12 ಕ್ಕೂ ಹೆಚ್ಚುಉ ಜನರನ್ನು ವಶಕ್ಕೆ ಪಡೆಯಲಾಗಿದೆ. ನಿನ್ನೆ ಸೋಮವಾರ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ನಗರದ ಸೀಗೆಹಟ್ಟಿ ನಿವಾಸಿ ಹರ್ಷ (24) ನ ಮೇಲೆ ಮಾರಕಾಸ್ತ್ರಗಳಿಂದ ಹತ್ಯೆಗೈದು ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದರು. . ಹಲ್ಲೆ ನಡೆಯುತ್ತಿದ್ದಂತೆ ಎರಡು ಗುಂಪುಗಳ ನಡುವೆ ನಗರದಲ್ಲಿ ಕಲ್ಲು ತೂರಾಟ ನಡೆದಿದೆ. ಈ ವೇಳೆ ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ಪೊಲೀಸರು ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.
ಈ ಹಿನ್ನೆಲೆ, ಮುನ್ನಚ್ಚರಿಕಾ ಕ್ರಮವಾಗಿ ಇಂದು ನಗರದ ಶಾಲಾ ಕಾಲೇಜುಗಳಿಗೆ ಡಿಸಿ ಡಾ. ಸೆಲ್ವಮಣಿ ರಜೆ ಘೋಷಣೆ ಮಾಡಿದ್ದಾರೆ.