No menu items!
Thursday, December 26, 2024

ರಾಷ್ಟ್ರಧ್ವಜ ಕುರಿತ ಹೇಳಿಕೆ ಈಶ್ವರಪ್ಪಗೆ ಛೀಮಾರಿ ಹಾಕಿದ ನಡ್ಡಾ

Must read

ನವದೆಹಲಿ: ಕೇಸರಿ ಧ್ವಜದ ಕುರಿತು ಸಚಿವ ಕೆ. ಎಸ್. ಈಶ್ವರಪ್ಪ ಹೇಳಿಕೆಯ ಕುರಿತು ಕರ್ನಾಟಕದಲ್ಲಿ ರಾಜಕೀಯ ಜಿದ್ದಾಜಿದ್ದಿನ ನಡುವೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, “ವಿವಾದಾತ್ಮಕ ಹೇಳಿಕೆ ಬಗ್ಗೆ ಈಶ್ವರಪ್ಪ ಅವರಿಗೆ ಛೀಮಾರಿ ಹಾಕಿದ್ದೇನೆ,” ಎಂದು ಹೇಳಿದ್ದಾರೆ.

‘ಇಂಡಿಯಾ ಟುಡೆ’ ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ನಡ್ಡಾ ಅವರು ಈ ಬಗ್ಗೆ ಮಾತನಾಡಿದ್ದು, “ರಾಷ್ಟ್ರಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕರ್ನಾಟಕ ಸಚಿವ ಈಶ್ವರಪ್ಪನವರಿಗೆ ನಾನು ಕರೆ ಮಾಡಿದ್ದೆ ಹಾಗೂ ಈ ಬಗ್ಗೆ ಕಟುವಾಗಿ ಛೀಮಾರಿ ಹಾಕಿದ್ದೇನೆ,” ಎಂದು ಹೇಳಿದ್ದಾರೆ.

ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ, “ಕೇಸರಿ ಧ್ವಜವು ಭವಿಷ್ಯದಲ್ಲಿ ರಾಷ್ಟ್ರಧ್ವಜವಾಗಬಹುದು,” ಎಂದು ಹೇಳಿದ್ದು, ಭಾರೀ ವಿವಾದಕ್ಕೆ ಕಾರಣವಾಗಿತ್ತು. ಸಚಿವರ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯಿಸುತ್ತಿದ್ದು, ರಾಷ್ಟ್ರಧ್ವಜದ ಬಗ್ಗೆ ಅವರು ಮಾಡಿದ ಹೇಳಿಕೆಗಾಗಿ ದೇಶದ್ರೋಹದ ಆರೋಪದ ಮೇಲೆ ಪ್ರಕರಣ ದಾಖಲಿಸಬೇಕು ಎಂದು ವಿಧಾನಸಭೆಯಲ್ಲಿಯೂ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸುತ್ತಿದೆ.

ಕರ್ನಾಟಕದ ಹಿಜಾಬ್‌ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಹಿಜಾಬ್ ವಿವಾದಕ್ಕೆ ಉತ್ತೇಜನ ನೀಡುತ್ತಿದೆ ಮತ್ತು ಆ ಮೂಲಕ ರಾಜಕೀಯ ಹಿಡಿತ ಸಾಧಿಸಲು ಪ್ರಯತ್ನಿಸುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದರು. ಪ್ರತಿಪಕ್ಷಗಳು ಹಿಜಾಬ್ ವಿಷಯವನ್ನು ಮತ್ತಷ್ಟು ದೊಡ್ಡದು ಮಾಡಲು ಪ್ರಯತ್ನಿಸುತ್ತಿವೆ. ನಾವು [ಬಿಜೆಪಿ] ಅಭಿವೃದ್ಧಿ ವಿಷಯಗಳ ಮೇಲೆ ಚುನಾವಣೆಗಳನ್ನು ಎದುರಿಸುತ್ತಿದ್ದೇವೆ ಎಂದು ಅವರು ಹೇಳಿದರು.

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಸಾಧನೆಯ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ನಡ್ಡಾ, ಸಿಖ್ ಬಹುಸಂಖ್ಯಾತ ರಾಜ್ಯದಲ್ಲಿ ಪಕ್ಷವು ತನ್ನ ನೆಲೆಯನ್ನು ವಿಸ್ತರಿಸಲು ಸಂಘಟಿತ ಪ್ರಯತ್ನಗಳನ್ನು ಮಾಡುತ್ತಿದೆ.ಪಂಜಾಬ್ ಚುನಾವಣಾ ಫಲಿತಾಂಶಗಳು ಅತಂತ್ರ ವಿಧಾನಸಭೆಗೆ ಕಾರಣವಾಗುವ ಸಾಧ್ಯತೆಯಿದೆ ಎಂದ ಅವರು ಆದಾಗ್ಯೂ, ಈ ಹಂತದಲ್ಲಿ ಅವರು ಮಾಜಿ ಮಿತ್ರಪಕ್ಷ ಶಿರೋಮಣಿ ಅಕಾಲಿದಳದೊಂದಿಗೆ ಮೈತ್ರಿ ಮಾಡಿಕೊಳ್ಳುವುದನ್ನು ತಳ್ಳಿಹಾಕಿದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article

error: Content is protected !!