ಉಡುಪಿ: ನಡು ರಸ್ತೆಯಲ್ಲಿ ಖಾಸಗಿ ಬಸ್ ಬೆಂಕಿ ಹೊತ್ತಿ ಉರಿದ ಘಟನೆ ಮಣಿಪಾಲದಲ್ಲಿ ಬುಧವಾರ ಮುಂಜಾನೆ ನಡೆದಿದೆ.
ಬಸ್ ಬಳ್ಳಾರಿಯ ಕೊಟ್ಟೂರಿನಿಂದ ಮಂಗಳೂರಿಗೆ ಹೋಗುತ್ತಿತ್ತು. ಮಣಿಪಾಲದ ಟೈಗರ್ ಸರ್ಕಲ್ ಬಳಿ ಬರುತ್ತಿದ್ದಂತೆ ಬಸ್ ಹೊತ್ತಿ ಉರಿದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬಸ್ಸಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.
ಪ್ರಾರಂಭದಲ್ಲಿ ಚಾಲಕನ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣ ಪ್ರಯಾಣಿಕರನ್ನು ಕೆಳಕ್ಕೆ ಇಳಿಸಲಾಯಿತು. ಬಸ್ಸು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.