ಬೆಳಗಾವಿ : ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಖಂಡಿಸಿ ಬೆಳಗಾವಿಯಲ್ಲಿ ವಿಎಚ್‍ಪಿ ನೇತೃತ್ವದಲ್ಲಿ ಶ್ರೀರಾಮ್ ಸೇನೆ ಮತ್ತು ಬಜರಂಗದಳದ ಕಾರ್ಯಕರ್ತರು ಪ್ರತಿಭಟನೆ ಮಾಡಿ ಹತ್ಯೆ ಮಾಡಿದವರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ.
ರಾಣಿ ಚನ್ನಮ್ಮಾ ವೃತ್ತದಿಂದ ಡಿಸಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಿತು. ಈ ವೇಳೆ ಹರ್ಷ ಫೋಟೋ ಹಿಡಿದು “ಅಮರ ರಹೆ, ಅಮರ ರಹೆ ಹರ್ಷ ಅಮರ ರಹೇ,” ಎಂದು ಘೋಷಣೆ ಕೂಗಿದರು. ಹರ್ಷ ನ ಹತ್ಯೆ ಮಾಡಿದವರಿಗೆ ಗಲ್ಲು ಶಿಕ್ಷೆ ವಿಧಿಸಿ, ಹಾಗೂ ಎಸ್‍ಡಿಪಿಐ, ಪಿಎಫ್‍ಐ ಸಂಘಟನೆಗಳನ್ನು ನಿಷೇದಿಸುವಂತೆ ಆಗ್ರಹಿಸಿದರು.
ಡಿಸಿ ಕಚೇರಿಗೆ ಆಗಮಿಸಿದ ಪ್ರತಿಭಟನಾ ರ್ಯಾಲಿ ಹರ್ಷ ಹತ್ಯೆಕೋರರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಪ್ರತಿಭಟನೆ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.