ಬೆಳಗಾವಿ : ಉಕ್ರೇನ್‍ನಲ್ಲಿ ಸಿಲುಕಿರುವ ಕರ್ನಾಟಕದ ವಿದ್ಯಾರ್ಥಿಗಳನ್ನು ಹಿಂದಕ್ಕೆ ಕರೆ ತರಲು ಸರಕಾರ ನೇಮಕ ಮಾಡಿದ ನೋಡಲ್ ಅಧಿಕಾರಿಗಳ ತಂಡದಲ್ಲಿ ಬೆಳಗಾವಿ ಜಿಲ್ಲೆಯ ಇಬ್ಬರು ಸೇರಿದ್ದು ಅವರನ್ನು ಮುಂಬಯಿಗೆ ಕಳುಹಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯ ನಿರ್ವಹಣ ಅಧಿಕಾರಿ ಪ್ರವೀಣ ಬಾಗೇವಾಡಿ ಹಾಗು ಬೆಳಗಾವಿ ಎಸಿ ರವಿ ಕರಿಲಿಂಗನ್ನವರ ಅವರನ್ನು ಮುಂಬೈಗೆ ಕಳುಹಿಸಲಾಗಿದೆ. ವಿದ್ಯಾರ್ಥಿಗಳು ಮುಂಬಯಿಗೆ ತಲುಪಿದ ನಂತರ ಆಯಾ ಜಿಲ್ಲೆಯ ವಿದ್ಯಾರ್ಥಿಗಳನ್ನು ಆಯಾ ಜಿಲ್ಲೆಯ ನೋಡಲ್ ಅಧಿಕಾರಿಗಳು ತಮ್ಮ ತಮ್ಮ ಜಿಲ್ಲೆಗೆ ಕರೆದುಕೊಂಡು ಹೋಗಲಿದ್ದಾರೆ.
ವಿದ್ಯಾರ್ಥಿಗಳ ಕುಟುಂಬಸ್ಥರು ಆತಂಕಕ್ಕೆ ಒಳಗಾಗಬೇಕಿಲ್ಲ. ವಿದ್ಯಾರ್ಥಿಗಳನ್ನ ಸುರಕ್ಷಿತವಾಗಿ ಕರೆತರಲು ಪ್ರಧಾನಿ ಮೋದಿ ಅವರು ಸತತ ಪ್ರಯತ್ನ ಮಾಡುತ್ತಿದ್ದಾರೆ. ಈಗಾಗಲೇ ಹಲವಾರು ವಿದ್ಯಾರ್ಥಿಗಳು ಉಕ್ರೇನ್‍ನಿಂದ ಭಾರತಕ್ಕೆ ಕರೆಸಿಕೊಳ್ಳಲಾಗಿದೆ ಎಂದರು.