ಬೆಂಗಳೂರು: ಕರ್ನಾಟಕದಲ್ಲಿ ಮಂಗಳವಾರ ಹೊಸದಾಗಿ 202 ಕೊರೊನಾ ಸೋಂಕುಗಳು ಪತ್ತೆಯಾಗಿವೆ. ಇದೇವೇಳೆ ರಾಜ್ಯದಲ್ಲಿ ಸೋಂಕಿಗೆ 7 ಜನ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ೯೭೧ ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 4,847 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಮಂಗಳವಾರ 150 ಕೊರೊನಾ ಪ್ರಕರಣ ಪತ್ತೆಯಾಗಿವೆ ಹಾಗೂ ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ 3,003 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಸೋಂಕಿನ ಮಾಹಿತಿ
ಬಳ್ಳಾರಿ 3, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 150, ಬೀದರ್ 1, ಚಿಕ್ಕಮಗಳೂರು 3, ಚಿತ್ರದುರ್ಗ 2, ದಕ್ಷಿಣ ಕನ್ನಡ 1, ದಾವಣಗೆರೆ 4, ಗದಗ 3, ಹಾಸನ 2, ಕೋಲಾರ 1, ಮೈಸೂರು 6, ಶಿವಮೊಗ್ಗ 3, ತುಮಕೂರು 10, ಉಡುಪಿ 2, ಉತ್ತರ ಕನ್ನಡ 4, ವಿಜಯಪುರ 2, ಪ್ರಕರಣ ದಾಖಲಾಗಿವೆ.