ಮಂಡ್ಯ: ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ಭಾನುವಾರ ಮಂಡ್ಯದ ಮದ್ದೂರಿನಲ್ಲಿ ಮಾಧ್ಯಮದವರ ಮಾತನಾಡಿದ ಅವರು, ತಮಗೆ ಈಗಾಗಲೇ ನಾಲ್ಕೈದು ಕ್ಷೇತ್ರದಿಂದ ಸ್ಪರ್ದಿಸಲು ಕಾರ್ಯಕರ್ತರು ಅಭಿಮಾನಿಗಳೂ ಒತ್ತಾಯಿಸುತ್ತಿದ್ದು ತಾವು ಈವರೆಗೂ ಎಲ್ಲಿಂದ ಸ್ಪರ್ದಿಸಬೇಕೆಂದು ತೀರ್ಮಾನ ಮಾಡಿಲ್ಲ. ಈ ಬಗ್ಗೆ ಯೋಚನೆ ಮಾಡಿ ತೀರ್ಮಾನ ಮಾಡಲ್ಲಿದ್ದು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದರು.
ಜಿ ಟಿ ದೇವೇಗೌಡ ಕಾಂಗ್ರೆಸ್ ಸೇರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಜಿ.ಟಿ.ದೇವೆಗೌಡರು ನನ್ನ ಜೊತೆ ಮಾತಮಾಡಿದ್ದಾರೆ. ಅವರು ಮತ್ತು ಅವರ ಮಗನಿಗೆ ಟಿಕೆಟ್ ಕೇಳಿದ್ದಾರೆ. ನಾನು ಇನ್ನು ಈ ಬಗ್ಗೆ ಹೈಕಮಾಂಡ ಜೊತೆ ಮಾತನಾಡಿಲ್ಲ ಎಂದು ತಿಳಿಸಿದರು.
ಸಿ.ಎಂ. ಇಬ್ರಾಹಿಂ ಕಾಂಗ್ರೆಸ್ ತೊರೆದ ವಿಚಾರವಾಗಿ ಕೇಳಿದ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಒಲ್ಲದ ಗಂಡನಿಗೆ ಮೊಸರಲ್ಲು ಕಲ್ಲು ಎಂಬಂತೆ ಇಬ್ರಾಹಿಂ ಅವರು ಈಗ ಪಕ್ಷ ಬಿಡುತ್ತಿರುವುದರಿಂ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಇಬ್ರಾಹಿಂಗೆ ಎಲ್ಲವನ್ನೂ ಕೊಟ್ಟಿದೆ. ಮನುಷ್ಯನಿಗೆ ಆಸೆ ಇರಬೇಕು ದುರಾಸೆ ಇರಬಾರದು. ಹಾಲಿ ಶಾಸಕ ಸಂಗಮೇಶ್ ಗೆ ಟಿಕೆಟ್ ತಪ್ಪಿಸಿ ಭದ್ರಾವತಿಯಲ್ಲಿ ಇಬ್ರಾಹಿಂ ಟಿಕೆಟ್ ಕೊಟ್ಟಿದ್ದೆವು. ಅಲ್ಲಿ ಅವರು ಸೋತರು. ಅದಾದ ಮೇಲೆ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿದ್ದೇವೆ. ಆದರೂ ಪಕ್ಷ ಬಿಟ್ಟು ಹೋಗಿದ್ದಾರೆ ಎಂದರು.
ನನ್ನ ಪ್ರಕಾರ ಅವಧಿಗೂ ಮುನ್ನ ಚುನಾವಣೆ ಬರುವುದಿಲ್ಲ. ಈ ಬಗ್ಗೆ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ, ಸಿಟಿ ರವಿ ಸೇರಿದಂತೆ ಹಲವಾರು ನಾಯಕರೂ ಹೇಳಿದ್ದಾರೆ. ಚುನಾವಣೆ ಇರುವುದು ಏಪ್ರಿಲ್‍ನಲ್ಲಿ. ಇದೆಲ್ಲ ಊಹಾಪೋಹಗಳಷ್ಟೇ. ಅವಧಿಗೂ ಮುನ್ನ ಚುನಾವಣೆ ಬಂದರೆ ನಾವು ಸಿದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.