No menu items!
Friday, December 6, 2024

ಕೆನಡಾದಲ್ಲಿ ರಸ್ತೆ ಅಪಘಾತ ಐವರು ಭಾರತೀಯ ವಿದ್ಯಾರ್ಥಿ ಗಳ ಸಾವು

Must read

ನವದೆಹಲಿ: ಭಾರತದ ಕಾಲಮಾನ ಶನಿವಾರ ಮುಂಜಾನೆ 3:45ಕ್ಕೆ ಕೆನಡಾದ ಟೊರೊಂಟೊ ಬಳಿ ನಡೆದ ರಸ್ತೆ ಅಪಘಾತದಲ್ಲಿ ಐವರು ಭಾರತೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಇನ್ನಿಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೆನಡಾದ ಸುದ್ದಿ ವಾಹಿನಿ CP24 ಪ್ರಕಾರ, ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಪ್ಯಾಸೆಂಜರ್ ವ್ಯಾನ್ ಒಂಟಾರಿಯೊದಲ್ಲಿನ ಹೆದ್ದಾರಿಯಲ್ಲಿ ಟ್ರಾಕ್ಟರ್-ಟ್ರೇಲರ್‌ಗೆ ಡಿಕ್ಕಿ ಹೊಡೆದಿದೆ.

ಮೃತರನ್ನು ಹರ್‌ಪ್ರೀತ್ ಸಿಂಗ್, ಜಸ್ಪಿಂದರ್ ಸಿಂಗ್, ಕರಣ್‌ಪಾಲ್ ಸಿಂಗ್, ಮೋಹಿತ್ ಚೌಹಾಣ್ ಮತ್ತು ಪವನ್ ಕುಮಾರ್ ಎಂದು ಗುರುತಿಸಲಾಗಿದೆ. ಅವರೆಲ್ಲರೂ 21 ರಿಂದ 24 ವರ್ಷದೊಳಗಿನವರು.

ಐವರು ಭಾರತೀಯ ವಿದ್ಯಾರ್ಥಿಗಳ ನಿಧನಕ್ಕೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಸೋಮವಾರ ಬೆಳಗ್ಗೆ ಟ್ವೀಟ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. ಕೆನಡಾದಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಎಲ್ಲ ಅಗತ್ಯವಾದ ಬೆಂಬಲ ಮತ್ತು ನೆರವು” ಒದಗಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಅವರು ಟ್ವೀಟ್‌ ಮಾಡಿದ್ದು, ಕೆನಡಾದಲ್ಲಿ ಐವರು ಭಾರತೀಯ ವಿದ್ಯಾರ್ಥಿಗಳ ನಿಧನಕ್ಕೆ ತೀವ್ರ ಸಂತಾಪ. ಅವರ ಕುಟುಂಬಗಳಿಗೆ ಸಂತಾಪ. ಗಾಯಗೊಂಡವರ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ, ಎಲ್ಲಾ ಅಗತ್ಯ ಬೆಂಬಲ ಮತ್ತು ಸಹಾಯವನ್ನು ನೀಡಲಾಗುತ್ತದೆ ಎಂದು ಬರೆದಿದ್ದಾರೆ.

ಘಟನೆ ಕುರಿತು ಟ್ವೀಟ್ ಮಾಡಿರುವ ಕೆನಡಾದಲ್ಲಿರುವ ಭಾರತದ ಹೈಕಮಿಷನರ್ ಅಜಯ್ ಬಿಸಾರಿಯಾ ಅವರು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.
ಕೆನಡಾದಲ್ಲಿರುವ ಭಾರತದ ಹೈಕಮಿಷನರ್ ಅಜಯ್ ಬಿಸಾರಿಯಾ ಅವರು ಕೆನಡಾದಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಸಹಾಯಕ್ಕಾಗಿ ಸಂತ್ರಸ್ತರ ಸ್ನೇಹಿತರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article

error: Content is protected !!