No menu items!
Thursday, November 21, 2024

ಗಾನ ಕೋಗಿಲೆ” ಲತಾ ಮಂಗೇಷ್ಕರ ಆರೋಗ್ಯ ಮತ್ತಷ್ಟು ಗಂಭೀರ

Must read

ಮುಂಬಯಿ : ಕೇವಲ ಎರಡು ದಿನದ ಹಿಂದಷ್ಟೆ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ ಸುಧಾರಿಸುತ್ತಿದೆ ಎಂದಿದ್ದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆ ವೈದ್ಯರು ಇಂದು ಲತಾ ಮಂಗೇಶ್ಕರ್ ಆರೋಗ್ಯ ತೀವ್ರ ಗಂಭೀರ ಸ್ಥಿತಿಯಲ್ಲಿದೆ ಎಂದಿದ್ದಾರೆ.

ಅವರನ್ನು ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ಸಹಾಯದಲ್ಲಿಡಲಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡದ ಮುಖ್ಯಸ್ಥ ಪ್ರತೀಕ್ ಸಂಧಾನಿ ತಿಳಿಸಿದ್ದಾರೆ.

ಫೆಬ್ರವರಿ 3 ರಂದು ಮಾಧ್ಯಮಗಳೊಟ್ಟಿಗೆ ಮಾಹಿತಿ ಹಂಚಿಕೊಂಡಿದ್ದ ವೈದ್ಯ ಪ್ರತೀಕ್, ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಅವರಿಗೆ ನೀಡಲಾಗಿದ್ದ ವೆಂಟಿಲೇಟರ್ ನೆರವನ್ನು ತೆಗೆಯಲಾಗಿದೆ ಕೆಲವೇ ಅವರಿಗೆ ಕೋವಿಡ್ ಹಾಗೂ ನ್ಯುಮೋನಿಯಾ ಸಹ ವಾಸಿಯಾಗಿದೆ ಎಂದಿದ್ದರು. ಆದರೆ ಕೇವಲ ಎರಡೇ ದಿನದಲ್ಲಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಮತ್ತೆ ಗಂಭೀರವಾಗಿದೆ.

ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ವೈದ್ಯ ಪ್ರತೀಕ್, ‘ಸಮಯ ಕಳೆದಂತೆ ಲತಾ ಮಂಗೇಶ್ಕರ್ ಅವರ ಆರೋಗ್ಯ ಹದಗೆಡುತ್ತಾ ಸಾಗುತ್ತಿದೆ” ಎಂದು ಹೇಳಿದ್ದಾರೆ. ವೈದ್ಯರು ನೀಡಿರುವ ಮಾಹಿತಿ ಲತಾ ಮಂಗೇಶ್ಕರ್ ಅಭಿಮಾನಿಗಳಿಗೆ, ಕುಟುಂಬ ಸದಸ್ಯರಿಗೆ ಆತಂಕ ತಂದಿದೆ.

ಕೋವಿಡ್ ಸೋಂಕಿನಿಂದಾಗಿ ಜನವರಿ 08 ರಂದು ಲತಾ ಮಂಗೇಶ್ಕರ್ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ಮೊದಲ ದಿನದಿಂದಲೂ ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ನ್ಯುಮೋನಿಯಾ ಸಹ ಆಗಿ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿತ್ತು.

ಲತಾ ಮಂಗೇಶ್ಕರ್ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವು ಸುಳ್ಳು ಸುದ್ದಿಗಳು ಹರಿದಾಡಿದ್ದವು. ಆದರೆ ಅವರ ಕುಟುಂಬ ಸದಸ್ಯರು ಅಭಿಮಾನಿಗಳಿಗೆ ಧೈರ್ಯದಿಂದ ಇರಬೇಕೆಂದು, ಸುಳ್ಳು ಸುದ್ದಿಗಳಿಗೆ ಕಿವಿಕೊಡಬಾರದೆಂದು, ಸುಳ್ಳು ಸುದ್ದಿಗಳಿಗೆ ಪ್ರಚಾರ ನೀಡಬಾರದೆಂದು ಕೆಲವು ದಿನಗಳ ಹಿಂದೆಯಷ್ಟೆ ಮನವಿ ಮಾಡಿದ್ದರು.

ಲತಾ ಮಂಗೇಶ್ಕರ್ 2019ರಲ್ಲಿಯೂ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. 2019ರ ನವೆಂಬರ್‌ನಲ್ಲಿ ಲತಾ ಮಂಗೇಶ್ಕರ್ ಅವರಿಗೆ ಉಸಿರಾಟದ ಸಮಸ್ಯೆ ಎದುರಾಗಿತ್ತು. ಈ ವೇಳೆ ಲತಾ ಮಂಗೇಶ್ಕರ್ ಅವರ ಸಹೋದರಿ ವೈರಲ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿಸಿದ್ದರು. 2021ರ ಸೆಪ್ಟೆಂಬರ್‌ ತಿಂಗಳಲ್ಲಿ ಲತಾ ಮಂಗೇಶ್ಕರ್ 92ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಕೇವಲ ಆಪ್ತರಿಗಷ್ಟೇ ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿತ್ತು.

ಗಾಯಕಿ ಲತಾ ಮಂಗೇಶ್ಕರ್, ಸೆಪ್ಟೆಂಬರ್ 28, 1929ರಲ್ಲಿ ಜನಿಸಿದರು. ಭಾರತದ ಹಲವು ಭಾಷೆಗಳಲ್ಲಿ ಲತಾ ಮಂಗೇಶ್ಕರ್ ಅವರು ಹಾಡಿದ್ದಾರೆ. ಹಿಂದಿ ಭಾಷೆಯಲ್ಲಿ ಅತೀ ಹೆಚ್ಚು ಹಾಡುಗಳನ್ನು ಹಾಡಿರುವ ಗಾಯಕಿ ಕನ್ನಡದಲ್ಲಿಯೂ ಒಂದು ಹಾಡನ್ನು ಹಾಡಿದ್ದಾರೆ. 1967ರಲ್ಲಿ ತೆರೆಕಂಡ ‘ಕ್ರಾಂತಿ ವೀರ ಸಂಗೊಳ್ಳಿರಾಯಣ್ಣ’ ಸಿನಿಮಾದಲ್ಲಿ ‘ಬೆಳ್ಳನೆ ಬೆಳಗಾಯಿತು’ ಎಂಬ ಹಾಡನ್ನು ಹಾಡಿದ್ದಾರೆ. ಇದು ಲತಾ ಮಂಗೇಶ್ಕರ್ ಕನ್ನಡದಲ್ಲಿ ಹಾಡಿದ ಏಕೈಕ ಹಾಡು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article

error: Content is protected !!