ಮುಂಬಯಿ : ಫೆಬ್ರವರಿ 6 ಮತ್ತು 7 ರಂದು ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥ ಎರಡು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲಾಗುತ್ತದೆ. ಗೌರವಾರ್ಥವಾಗಿ ಎರಡು ದಿನಗಳ ಕಾಲ ರಾಷ್ಟ್ರಧ್ವಜವನ್ನು ಅರ್ಧಮಟ್ಟಕ್ಕೆ ಹಾರಿಸಲಾಗುತ್ತದೆ, ”ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಜನವರಿ 8 ರಂದು ಕೋವಿಡ್ -19 ಗೆ ಧನಾತ್ಮಕ ಪರೀಕ್ಷೆ ನಡೆಸಿದ ನಂತರ ಲತಾ ಮಂಗೇಶ್ಕರ್ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಯಿತು. ಕಳೆದೆರಡು ವಾರಗಳಿಂದ ಆಕೆ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದರು.
ಇತ್ತೀಚೆಗೆ ಸುಧಾರಣೆಯ ಲಕ್ಷಣಗಳನ್ನು ತೋರಿಸಿದ ನಂತರ, ಆಕೆಯ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿತು. ದುರದೃಷ್ಟವಶಾತ್ ಅವರು ಇಂದು ಇಹಲೋಕ ತ್ಯಜಿಸಿದ್ದು, ಇಡೀ ದೇಶವೇ ದುಃಖದಲ್ಲಿ ಮುಳುಗಿದೆ.
ಲತಾ ಮಂಗೇಶ್ಕರ್ ಅವರ ಪಾರ್ಥಿವ ಶರೀರವನ್ನು ಅವರ ಪೆದ್ದಾರ್ ರಸ್ತೆಯ ನಿವಾಸವಾದ ಪ್ರಭುಕುಂಜ್‌ಗೆ ಮಧ್ಯಾಹ್ನ 12 ರಿಂದ 3 ಗಂಟೆ ವರೆಗೆ ಸ್ಥಳಾಂತರಿಸಲಾಗುತ್ತದೆ. ಬಳಿಕ ಆಕೆಯ ಪಾರ್ಥಿವ ಶರೀರವನ್ನು ಮುಂಬೈನ ಶಿವಾಜಿ ಪಾರ್ಕ್‌ಗೆ ಸಂಜೆ 4:30ರ ಸುಮಾರಿಗೆ ಸ್ಥಳಾಂತರಿಸಲಾಗುವುದು. ಆಕೆಯ ಅಂತ್ಯಕ್ರಿಯೆ ಶಿವಾಜಿ ಪಾರ್ಕ್‌ನಲ್ಲಿ ನಡೆಯಲಿದೆ ಎಂದು ತಿಳಿಸಲಾಗಿದೆ.
ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, “ನಾನು ಹೇಳಲಾಗದಷ್ಟು ದುಃಖಿತನಾಗಿದ್ದೇನೆ. ದಯೆ ಮತ್ತು ಕಾಳಜಿಯುಳ್ಳ ಲತಾ ದೀದಿ ನಮ್ಮನ್ನು ಅಗಲಿದ್ದಾರೆ. ಅವರು ನಮ್ಮ ದೇಶದಲ್ಲಿ ತುಂಬಲಾರದ ಶೂನ್ಯವನ್ನು ಮಾಡಿದ್ದಾರೆ. ಮುಂಬರುವ ಪೀಳಿಗೆಗಳು ಅವರನ್ನು ನೆನಪಿಸಿಕೊಳ್ಳುತ್ತವೆ ಎಂದು ಹೇಳಿದ್ದಾರೆ.
ತಮ್ಮ ಏಳು ದಶಕಗಳ ಸುದೀರ್ಘ ವೃತ್ತಿಜೀವನದಲ್ಲಿ, ಲತಾ ಮಂಗೇಶ್ಕರ್ ಅವರು ನಮಗೆ ಸಂಗೀತದ ರತ್ನಗಳಾದ “ಏ ಮೇರೆ ವತನ್ ಕೆ ಲೋಗೋ, ” “ಲಗ್ ಜಾ ಗಲೇ, ” “ಯೇ ಕಹಾನ್ ಆಗೇ ಹೈ ಹಮ್ “ಮತ್ತು “ಪ್ಯಾರ್ ಕಿಯಾ ತೊ ಡರ್ನಾ ಕ್ಯಾ” ಮುಂತಾದವುಗಳನ್ನು ಎವರ್ ಗ್ರೀನ್ ಹಾಡುಗಳನ್ನು ನೀಡಿದ್ದಾರೆ.
ಆಕೆಯ ಅಸಾಧಾರಣ ಪ್ರತಿಭೆಗಾಗಿ ಭಾರತರತ್ನ, ಪದ್ಮವಿಭೂಷಣ, ಪದ್ಮಭೂಷಣ ಮತ್ತು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸೇರಿದಂತೆ ಅಸಂಖ್ಯಾತ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.