No menu items!
Thursday, December 5, 2024

ಹಿಜಾಬ್ ತೆಗೆಯಲು ನಿರಾಕರಣೆ, ವಿದ್ಯಾರ್ಥಿನಿಯರನ್ನು ಪ್ರತೇಕ ಕೊಠಡಿಯಲ್ಲಿ ಕುಡ್ರಿಸಿದ ಸರಕಾರಿ ಕಾಲೇಜು

Must read

ಕುಂದಾಪುರ: ಈಗಾಗಲೇ ಹಿಜಾಬ್, ಕೇಸರಿ ಶಾಲು ವಿವಾದದ ಹಿನ್ನಲೆಯಲ್ಲಿ ಕುಂದಾಪುರದ ಸರ್ಕಾರಿ ಕಾಲೇಜುಗಳಿಗೆ 2 ದಿನ ರಜೆ ಘೋಷಣೆ ಮಾಡಲಾಗಿತ್ತು. ಇದರ ನಡುವೆ ರಾಜ್ಯ ಸರ್ಕಾರ ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿ, ಆದೇಶಿಸಿತ್ತು.

ಹೀಗಿದ್ದೂ ಇಂದು ಕಾಲೇಜು ಆರಂಭವಾಗುತ್ತಿದ್ದಂತೆ ವಿದ್ಯಾರ್ಥಿನಿಯರು ಮತ್ತೆ ಹಿಜಾಬ್ ಧರಿಸಿಯೇ ಕಾಲೇಜಿಗೆ ಆಗಮಿಸಿದ್ದಾರೆ. ಹೀಗಾಗಿ ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ.

ಉಡುಪಿ ಜಿಲ್ಲೆಯ ಕುಂದಾಪುರದ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯರು ಮತ್ತೆ ಇಂದು ಹಿಜಾಬ್ ಧರಿಸಿಯೇ ಕಾಲೇಜಿಗೆ ಆಗಮಿಸಿದ್ದಾರೆ. ಹಿಜಾಬ್ ಧರಿಸದೇ ತರಗತಿ ಪ್ರವೇಶಕ್ಕೂ ನಿರಾಕರಿಸಿದ ಕಾರಣ, ಅವರನ್ನು ಶಾಲೆಯ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ.

ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿರುವಂತ ವಿದ್ಯಾರ್ಥಿನಿಯರನ್ನು ಹಿಜಾಬ್ ತೆಗೆದು ತರಗತಿಗೆ ಹಾಜರಾಗುವಂತೆ ಪ್ರಾಂಶುಪಾಲರು, ಉಪನ್ಯಾಸಕರು ಮನವೊಲಿಸುತ್ತಿದ್ದಾರೆ. ಆದ್ರೇ ವಿದ್ಯಾರ್ಥಿನಿಯರು ಮಾತ್ರ ” ನಮ್ಮ ಮನೆಯಲ್ಲಿ ಹೇಳಿ ಕಳುಹಿಸಿದ್ದಾರೆ. ನಾವು ಸ್ಕಾರ್ಫ್ ತೆಗೆಯೋದಿಲ್ಲ. ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಕೋರ್ಟ್ ಸೂಚನೆ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳುತೇವೆ”, ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಹಿಜಾಬ್ ಧರಿಸಿ ಕಾಲೇಜ್ ಕ್ಯಾಂಪಸ್ ಒಳಗೆ ಬರಬಹುದು, ಆದರೆ ಕ್ಲಾಸ್ ಒಳಗೆ ಬರುವಹಾಗಿಲ್ಲ, ಯುನಿಫಾರ್ಮ್ ಸಿಸ್ಟಮ್ ಎಲ್ಲರೂ ಪಾಲಿಸಬೇಕಾಗುತ್ತದೆಂದು ಸರಕಾರ ಶನಿವಾರ ಆದೇಶಿಸಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article

error: Content is protected !!