ಹಾವೇರಿ : ಬೆಂಗಳೂರಿನಿಂದ ಬೆಳಗಾವಿ ಜಿಲ್ಲೆಯ ಗೋಕಾಕ ಗೆ ತೆರಳುತ್ತಿದ್ದ ಖಾಸಗಿ ಬಸ್ ಹಾವೇರಿ ಜಿಲ್ಲೆಯ ದೇವಗಿರಿ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಫ್ಲೈ ಓವರ್ ಮೇಲಿನಿಂದ ಸುಮಾರು 50-ಅಡಿ ಕೆಳಗೆ ಸರ್ವಿಸ್ ರಸ್ತೆಗೆ ಬಿದ್ದು ಸಂಭವಿಸಿದ ಅಪಘಾತದಲ್ಲಿ ಚಾಲಕ ಹಾಗೂ ಓರ್ವ ಪ್ರಯಾಣಿಕ ಸ್ಥಳದಲ್ಲೇ ಅಸುನಿಗಿ 15 ಇತರ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶನಿವಾರ ಮಧ್ಯರಾತ್ರಿ ಸಂಭವಿಸಿದೆ.
ಬಸ್ಸಿನಲ್ಲಿ 25 ಜನ ಪ್ರಯಾಣಿಸುತ್ತಿದ್ದರು. ಗಾಯಗೊಂಡಿರುವ ಪ್ರಯಾಣಿಕರನ್ನು ಹಾವೇರಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್, ದೇಶದ ಪ್ರಖ್ಯಾತ ಸರಕು ಹಾಗೂ ಸಾರಿಗೆ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ಮೂಲದ ಸಂಸ್ಥೆಗೆ ಸೇರಿದೆಯೇನ್ನಲಾಗಿದೆ.